Dailyhunt Logo
  • Light mode
    Follow system
    Dark mode
    • Play Story
    • App Story
ಕೋವಿಡ್ ರೋಗಿ ಸಾವು: ವೆನ್‍ಲಾಕ್ ಆಸ್ಪತ್ರೆ ಎದುರು ಸಂಬಂಧಿಕರ ಗಲಾಟೆ

ಕೋವಿಡ್ ರೋಗಿ ಸಾವು: ವೆನ್‍ಲಾಕ್ ಆಸ್ಪತ್ರೆ ಎದುರು ಸಂಬಂಧಿಕರ ಗಲಾಟೆ

ಮಂಗಳೂರು: ಇಲ್ಲಿಯ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೋರ್ವಳು ಸಾವನ್ನಪ್ಪಿದ್ದು, ಈಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೆ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಭಾನುವಾರ ಸಂಜೆ ನಿಧನರಾಗಿದ್ದಾರೆ. ಇವರ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂಧಿಕರು ಗಲಾಟೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಶಾಸಕ ವೇದವ್ಯಾಸ ಕಾಮತ್ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳುವ ಮೂಲಕ ಮಾತುಕತೆ ನಡೆಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani