Dailyhunt Logo
  • Light mode
    Follow system
    Dark mode
    • Play Story
    • App Story
ಮಳೆ ಬಾರದಿದ್ದರೂ ವಿದ್ಯುತ್‌ ಕೊರತೆ ಆಗದಂತೆ ಕ್ರಮ: ಸಿಎಂ

ಮಳೆ ಬಾರದಿದ್ದರೂ ವಿದ್ಯುತ್‌ ಕೊರತೆ ಆಗದಂತೆ ಕ್ರಮ: ಸಿಎಂ

ಬೆಂಗಳೂರು: ಎಲ್‌ ನಿನೋ ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂಧನ ಇಲಾಖೆ ಪ್ರಗತಿಪರಿಶೀಲನೆ ನಡೆಸಿದ ಅವರು, ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಏನೇನು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ ಎನ್ನುವ ಬಗ್ಗೆ ವಿವರ ಪಡೆದು ಸಾರ್ವಜನಿಕ ಬಳಕೆಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಇಂಧನ ಭದ್ರತೆಗಾಗಿ ಸರಕಾರಕ್ಕೆ ಮೀಸಲಾದ ಕಲ್ಲಿದ್ದಲು ಗಣಿಗಳನ್ನು ಕಾರ್ಯಾರಂಭಗೊಳಿಸಿ, ಸಾಕಷ್ಟು ಕಲ್ಲಿದ್ದಲು ಸಂಗ್ರಹವನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪಂಪ್ಡ್ ಸ್ಟೋರೇಜ್‌ ಯೋಜನೆಗಳ ಜಾರಿಗೊಳಿಸಿ

ಹಿಂದಿನ ವರ್ಷಕ್ಕೆ ಹೋಲಿಸಿದರೆ ಸದ್ಯ ನಮ್ಮಲ್ಲಿ ವಿದ್ಯುತ್‌ ಸಂಗ್ರಹಣಾ ಸ್ಥಿತಿ ಸುಸ್ಥಿತಿಯಲ್ಲಿದೆ. ಹಿಂದಿನ 3 ವರ್ಷ ವಿದ್ಯುತ್‌ ಕಡಿತ ಇಲ್ಲದೆ ನಿರ್ವಹಿಸಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸದ್ಯದ ಸ್ಥಿತಿಯಲ್ಲಿ ನವೀಕರಿಸಬಹುದಾದ ಇಂಧನದ ಸಮರ್ಥ ನಿರ್ವಹಣೆಗಾಗಿ ಬ್ಯಾಟರಿ ಎನರ್ಜಿ ಸ್ಟೋರೇಜ್‌ ಸಿಸ್ಟಮ್‌ಗಳು, ಪಂಪ್ಡ್ ಸ್ಟೋರೇಜ್‌ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು.

ನಾವು ಐ.ಟಿ. ಕ್ಯಾಪಿಟಲ್‌ ಆಗಿದ್ದೇವೆ. ಕೃತಕ ಬುದ್ಧಿಮತ್ತೆಯಲ್ಲೂ ನಮ್ಮ ರಾಜ್ಯ ಕ್ಯಾಪಿಟಲ್‌ ಆಗಬೇಕು ಎನ್ನುವ ದಿಕ್ಕಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ. ಹೀಗಾಗಿ ಡೇಟಾ ಸೆಂಟರ್‌ಗಳು, ಕೃತಕ ಬುದ್ಧಿಮತ್ತೆ ಮೂಲಸೌಕರ್ಯ ಹಾಗೂ ಡಿಜಿಟಲ್‌ ಆರ್ಥಿಕತೆಯಿಂದ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ರೈತರ ಅನುಕೂಲಕ್ಕಾಗಿ ನಮ್ಮ ಸರ್ಕಾರ ಕೃಷಿ ವಿದ್ಯುತ್‌ ಸಹಾಯಧನವನ್ನು ವರ್ಷಕ್ಕೆ 22,000 ಕೋ. ರೂ.ನೀಡುತ್ತಿದ್ದೇವೆ. ಹೀಗಾಗಿ ಫೀಡರ್‌ಸೌರೀಕರಣ ಇಂಧನ-ದಕ್ಷ ಪಂಪ್‌ ಸೆಟ್‌ಗಳ ಬಳಕೆ, ವಿದ್ಯುತ್‌ ಬೇಡಿಕೆ ನಿರ್ವಹಣೆ ಕಾರ್ಯಕ್ರಮಗಳನ್ನು ವೇಗಗೊಳಿಸಿ. ಸ್ಮಾರ್ಟ್‌ ಮೀಟರ್‌ಗಳನ್ನು ಪಾರದರ್ಶಕವಾಗಿ ಹಾಗೂ ನಿಗದಿತ ಸಮಯದಲ್ಲಿ ಅಳವಡಿಸಬೇಕು ಎನ್ನುವ ಸೂಚನೆಯನ್ನು ಸಿಎಂ ನೀಡಿದರು.

ಎಸ್ಕಾಂಗಳಿಗೆ ಬಾಕಿ ಹಣ ಪಾವತಿಗೆ ಜಾರ್ಜ್‌ ಮನವಿ

ಗೃಹಜ್ಯೋತಿ ಯೋಜನೆಯಿಂದಾಗಿ ಯಾವುದೇ ಹೊರೆ ಆಗಿಲ್ಲ. ಆದರೆ, ಸರಕಾರಿ ಇಲಾಖೆಗಳು ಎಸ್ಕಾಂಗಳಿಗೆ ಪಾವತಿಸಬೇಕಿರುವ 12,631 ಕೋ. ರೂ. ಬಾಕಿಯನ್ನು ತ್ವರಿತವಾಗಿ ಪಾವತಿಸುವುದು ಅಥವಾ ಹಣಕಾಸು ಭದ್ರತೆ ಮೂಲಕ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಸಿಎಂಗೆ ಮನವಿ ಮಾಡಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani