ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಕೆಳಗೆ ಬಿದ್ದು ಮಹಿಳಾ ಟೆಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಮ್ಮಡಹಳ್ಳಿ ಗೇಟ್‌ನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ಜರುಗಿದೆ.
ಬೆಂಗಳೂರಿನ ಹರೀಶ್ ಎಂಬುವವರ ಪತ್ನಿ ಅಂಜನಾ (32) ಮೃತರು.
ದಂಪತಿ ಹಾಗೂ ಸ್ನೇಹಿತ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಂಜನಾ ಹಿಂಬದಿ ಕುಳಿತು ಲ್ಯಾಪ್‌ಟ್ಯಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು.
ಕಾರು ಉಮ್ಮಡಹಳ್ಳಿ ಗೇಟ್ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಿದ್ದಾಗ ಕಾರಿನ ವಿಂಡೋ ತೆರೆದಿದ್ದು, ಅಂಜನಾ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದುವಾಗ ಮೃತಪಟ್ಟಿದ್ದಾರೆ. ಪತಿ ಹರೀಶ್ ಹಾಗೂ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ಮೃತ ಅಂಜನಾ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೇಲಿಂದ ಕಾರು ಬೀಳುವಾಗ ಕಾರಿನ ವಿಂಡೋ ತೆರೆದುಕೊಂಡು ಮೃತ ಅಂಜನಾ ಕೆಳಗೆ ಬಿದ್ದಿದ್ದಾರೆ. ಆಗ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವಗೊಂಡಿದ್ದಾರೆ. ಕೂಡಲೇ ಆಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಪತಿ ಹರೀಶ್ ಹಾಗೂ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಾಫ್ಟ್ವೇರ್ ಕಂಪನಿ ನಡೆಸುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

