Dailyhunt Logo
  • Light mode
    Follow system
    Dark mode
    • Play Story
    • App Story
Manjeshwar: ಬೆದರಿಕೆ ಪ್ರಕರಣ ; ಇಬ್ಬರ ಬಂಧನ

Manjeshwar: ಬೆದರಿಕೆ ಪ್ರಕರಣ ; ಇಬ್ಬರ ಬಂಧನ

ಮಂಜೇಶ್ವರ: ರಾತ್ರಿ ಹೊತ್ತಿಲಲ್ಲಿ ಮನೆಗೆ ನುಗ್ಗಿ ಮಹಿಳೆ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆಸಂಬಂಧಿಸಿ ಮಂಜೇಶ್ವರ ನಿವಾಸಿಗಳಾದ ಸೆನೋಹರ್‌ (28) ಮತ್ತು ಅನ್ವರ್‌(46)ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಜೂನ್‌ 23 ರಂದು ರಾತ್ರಿ ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 27 ರ ಹರೆಯದ ಮಹಿಳೆಯ ಮನೆಗೆ ನುಗ್ಗಿದ ಆರೋಪಿಗಳು ಮಹಿಳೆ ಹಾಗೂ ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವುದಾಗಿ ಬೆದರಿಕೆಯೊಡ್ಡಿರುವುದಾಗಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿತ್ತು.

ಅಂದು ಮನೆಗೆ ನುಗ್ಗಿದ್ದ ಆರೋಪಿಗಳು ವಜ್ರದ ಬೆಂಡೋಲೆಯನ್ನು ಅಪಹರಿಸಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿತ್ತು.

Dailyhunt
Disclaimer: This content has not been generated, created or edited by Dailyhunt. Publisher: Udayavani