ಟಾಪ್ 40 ಸುದ್ದಿ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ಮು ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ. ನನ್ನಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಕರ್ನಾಟಕಕ್ಕೆ ಸೇರಿಸಿ ಎಂದರು.
ಇಂದಿನಿಂದ ಅಧಿವೇಶನ ಆರಂಭವಾಗುತ್ತಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳ ಜತೆಯೂ ಚರ್ಚಿಸುತ್ತೇವೆ ಎಂದರು.
ಪ್ರಚಾರದ ಕೆಲಸ: ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಿ, ಮಹಾರಾಷ್ಟ್ರದ ಸಿಎಂ ಜನರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಗಡಿ ವಿಚಾರ ಎತ್ತಿ, ಅದರ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ
ಕರ್ನಾಟಕದ ಭೂಮಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಹೇಳುತ್ತಿದ್ದಾರೆ. ನಾವು ಮಹಾರಾಷ್ಟ್ರ ಭೂಮಿ ನಮಗೆ ಸೇರಬೇಕು ಅಂತ ಹೇಳಬೇಕೇ? ಇದು ಉದ್ಧಟತನದ ಹೇಳಿಕೆಯಾಗಿದೆ. ಮಹಾಜನ್ ವರದಿಯೇ ಅಂತಿಮ ಎಂದರು.