Dailyhunt
ನಾಗಾಲೋಟ: ಸಾರ್ವಕಾಲಿಕ ದಾಖಲೆ - 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ನಾಗಾಲೋಟ: ಸಾರ್ವಕಾಲಿಕ ದಾಖಲೆ - 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ನವದೆಹಲಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ (ಸೆಪ್ಟೆಂಬರ್ 23) ಬಾಂಬೆ ಷೇರು ಮಾರುಕಟ್ಟೆ ಸೆನ್ಸೆಕ್ಸ್ 958 ಅಂಕಗಳ ಜಿಗಿತದೊಂದಿಗೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು.

ಜಮ್ಮು ಕಾಶ್ಮೀರದ ಉರಿಯಲ್ಲಿ ಮೂವರು ಪಾಕ್ ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು

ಎನ್ ಎಸ್ ಇ ನಿಫ್ಟಿ 276.30 ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದ 17,822.95 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಷೇರುಪೇಟೆ ಮಧ್ಯಂತರ ವಹಿವಾಟಿನ ವೇಳೆ ನಿಫ್ಟಿ 17,843.90 ಅಂಕಗಳ ಮಟ್ಟ ತಲುಪಿತ್ತು.

ಷೇರುಪೇಟೆ ಸೆನ್ಸೆಕ್ಸ್ ಇಂದು ಬೆಳಗ್ಗೆ ಆರಂಭಿಕವಾಗಿ 59,957.25 ಅಂಕಗಳ ಸಾರ್ವಕಾಲಿಕ ಗರಿಷ್ಠ ದಾಖಲೆಯ ಮಟ್ಟ ತಲುಪಿತ್ತು. ಸಂಜೆಯ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 958.03 ಅಂಕಗಳ ಏರಿಕೆಯೊಂದಿಗೆ 59,885.36 ಅಂಕದೊಂದಿಗೆ ದಾಖಲೆಯ ಮಟ್ಟ ತಲುಪಿದೆ.

ಬಜಾಜ್ ಫಿನ್ ಸರ್ವ್, ಎಲ್ ಆಯಂಡ್ ಟಿ, ಎಚ್ ಡಿಎಫ್ ಸಿ, ಆಯಕ್ಸಿಸ್ ಬ್ಯಾಂಕ್, ಎಸ್ ಬಿಐ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿವೆ. ಡಾ.ರೆಡ್ಡೀಸ್, ಐಟಿಸಿ, ನೆಸ್ಲೆ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಕಂಡಿವೆ.

Dailyhunt
Disclaimer: This content has not been generated, created or edited by Dailyhunt. Publisher: Udayavani