Dailyhunt Logo
  • Light mode
    Follow system
    Dark mode
    • Play Story
    • App Story
ನಿರ್ದೇಶಕ ಓಂಪ್ರಕಾಶ್‌ ರಾವ್‌ ಪತ್ನಿಗೆ ಬೆದರಿಕೆ: ಇಬ್ಬರ ವಿರುದ್ಧ ಎಫ್‌ಐಆರ್‌

ನಿರ್ದೇಶಕ ಓಂಪ್ರಕಾಶ್‌ ರಾವ್‌ ಪತ್ನಿಗೆ ಬೆದರಿಕೆ: ಇಬ್ಬರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಿರ್ದೇಶಕ, ನಟ ಎನ್‌. ಓಂ ಪ್ರಕಾಶ್‌ ರಾವ್‌ ಅವರ ಪತ್ನಿ ಡೆನ್ನಿಸಾ ಪ್ರಕಾಶ್‌ಗೆ ಬೆದರಿಕೆ ಹಾಕಿದ್ದ ಆರೋಪದಡಿ ಇಬ್ಬರ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ್‌ಶೆಟ್ಟಿ ಹಾಗೂ ವಾಸುದೇವ್‌ ರೆಡ್ಡಿ ವಿರುದ್ಧ ಎಫ್‌ಐಆರ್‌ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ದೂರಿನಲ್ಲಿ ಏನಿದೆ?:
ಓಂಪ್ರಕಾಶ್‌ ರಾವ್‌ ಸದ್ಯ ಫಿನಿಕ್ಸ್‌ ಹೆಸರಿನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಲನಚಿತ್ರವನ್ನು ನಿರ್ಮಿಸಲು ಭಾಸ್ಕರ್‌ ಶೆಟ್ಟಿ ಅವರಿಂದ 40 ಲಕ್ಷ ರೂ. ಸಾಲ ಪಡೆದಿದ್ದರು. ಚಿತ್ರವು ನಿರ್ಮಾಣ ಹಂತದಲ್ಲಿ ಇದೆ. ಹಣದ ವಿಚಾರವಾಗಿ ಇಬ್ಬರು ಆರೋಪಿಗಳು ಆ.10 ಮತ್ತು 20ರಂದು ಮನೆಯ ಬಳಿಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು. ಹಣವನ್ನು ವಾಪಸ್‌ ಕೊಡಲು ಸಾಧ್ಯ ಆಗದಿದ್ದರೆ ಮನೆಯನ್ನು ನಮ್ಮ ಹೆಸರಿಗೆ ಬರೆದುಕೊಡಿ ಎಂಬುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಡೆನ್ನಿಸಾ ನೀಡಿದ ದೂರಿನಲ್ಲಿ ಉಲ್ಲೇಖೀಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani