Dailyhunt
ನ್ಯಾಯಾಂಗ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಲಿ : ರಾಷ್ಟ್ರಪತಿ

ನ್ಯಾಯಾಂಗ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಲಿ : ರಾಷ್ಟ್ರಪತಿ

ನವ ದೆಹಲಿ: ಸಂವಿಧಾನದ ಅಂತರ್ಗತ ಆದರ್ಶಗಳ ಪಾಲನೆಯಾಗಬೇಕು ಎಂದರೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗಬೇಕು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅಭಿಪ್ರಾಯ ಪಟ್ಟಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್‌ ನಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್‌ ಹೈ ಕೋರ್ಟ್‌ನ ನೂತನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಮಾತನ್ನು ಹೇಳಿದ್ದಾರೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ 3 ಮಹಿಳಾ ನ್ಯಾಯಮೂರ್ತಿಗಳು ಸೇರಿ 9 ಮಂದಿಯನ್ನು ನೇಮಕ ಮಾಡಿಕೊಳ್ಳುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಎಲ್ಲ ಹೈ ಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ಸೇರಿದರೆ ಕೇವಲ ಶೇ. 12ರಷ್ಟು ಸ್ಥಾನದಲ್ಲಿ ಮಾತ್ರವೇ ಮಹಿಳೆಯರಿದ್ದಾರೆ. ಈ ಸಂಖ್ಯೆ ಅಧಿಕವಾಗಬೇಕೆಂದು ಅವರು ಹೇಳಿದ್ದಾರೆ.

ಇದನ್ನೂ ಓದಿ :ಕಾಂಗ್ರೆಸಿಗರು 2 ದಶಕ ಅಧಿಕಾರಕ್ಕೆ ಬರುವ ಕನಸು ಕಾಣಬೇಡಿ: ನಳಿನ್‌

Dailyhunt
Disclaimer: This content has not been generated, created or edited by Dailyhunt. Publisher: Udayavani