Dailyhunt Logo
  • Light mode
    Follow system
    Dark mode
    • Play Story
    • App Story
ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಂಗಿದ್ದ ಹೋಟೆಲ್ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಹಾರ ಸೇವಿಸಿದರಾದರು, ಇಬ್ಬರು ನಾಯಕರು ಭೇಟಿಯಾಗಲಿಲ್ಲ.

ಶನಿವಾರ ಹಾವೇರಿ ಜಿಲ್ಕೆ ಹಾನಗಲ್ಲ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ಮುಗಿಸಿ ಸಿದ್ದರಾಮಯ್ಯ ಅವರು ಇಲ್ಲಿನ ವಿಮಾನ ನಿಲ್ದಾಣ ಬಳಿಯ ಫಾರ್ಚ್ಯೂನ್ ಹೋಟೆಲ್ ನಲ್ಲಿ ತಂಗಿದ್ದರು.

ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

ಹಾನಗಲ್ಲ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆಂದು ರವಿವಾರ ಬೆಳಿಗ್ಗೆ ವಿಮಾನ ಮೂಲಕ ಹುಬ್ಬಳ್ಳಿ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಾರ್ಚ್ಯೂನ್ ಹೋಟೆಲ್ ಗೆ ಆಗಮಿಸಿ ಉಪಹಾರ ಸೇವಿಸಿ ಹಾನಗಲ್ಲ ಪ್ರಚಾರಕ್ಕೆ ತರಳಿದರು.

ಇದೇ ವೇಳೆ ಹಲವರು ಸಿಎಂಗೆ ಮನವಿ ಸಲ್ಲಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani