ಉದಯವಾಣಿ

1.3M Followers

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ

28 Jan 2023.5:54 PM

ಭೋಪಾಲ: ಮಧ್ಯಪ್ರದೇಶದ ಹೌಶಂಗಾಬಾದ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಪತ್ರಕರ್ತರೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ.

ಜ.25ರಂದೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ಷುಲ್ಲಕ ಕಾರಣಕ್ಕಾಗಿ ನಡೆದಿದ್ದ ವಾಗ್ವಾದದ ವಿಚಾರ ಥಳಿತದಲ್ಲಿ ಮುಕ್ತಾಯವಾಗಿದೆ.

ಹಳೆಯ ವೈಷಮ್ಯಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Udayavani

#Hashtags