ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬುಧವಾರ (ಜುಲೈ 8) ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಹಶೀಲ್ದಾರ್ ರಂಜಿತ್ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ರಜೆಯಿಂದ ಉಂಟಾಗುವ ಶೈಕ್ಷಣಿಕ ನಷ್ಟವನ್ನು ಮುಂದಿನ ರಜಾದಿನಗಳಲ್ಲಿ ಸರಿಹೊಂದಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

