ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಬೀರಿಗ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಜು. 25 ರಂದು ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ತಿಮ್ಮಪ್ಪ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬೈಕ್ ಸವಾರನು ವಾಹನವನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿ ಕಾರು ಚಾಲಕ ಸ್ನೇಹಿತ್ ನೀಡಿದ ದೂರಿನನ್ವಯ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ (Traffic Police Station) ಪ್ರಕರಣ ದಾಖಲಾಗಿದೆ.

