ಪುತ್ತೂರು: ಕಂಬಳ ಕ್ಷೇತ್ರದ ಸಂಘಟಕ, ವೀಕ್ಷಣೆ ವಿವರಣೆಗಾರ ನಿರಂಜನ ರೈ ಮಠಂತಬೆಟ್ಟು ಅವರು ಜು.8ರ ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾಗಿದ್ದ ಅವರು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಆಗಮಿಸಿದ್ದು, ಈ ವೇಳೆ ಕುಸಿದು ಬಿದ್ದಿದ್ದಾರೆ.
ಬಳಿಕ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಉಪಾಧ್ಯಕ್ಷರಾಗಿ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಹಿಂದೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

