ಪುತ್ತೂರು: ಪುತ್ತೂರು ಕೆಎಸ್‌ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ಜಗಳವಾಡುತ್ತಿದ್ದ ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ನಾಸಿರ್, ನವಾಜ್, ನಿಸಾರ್ ಹಾಗೂ ಇತರರು ಆರೋಪಿಗಳಾಗಿದ್ದಾರೆ. ಜು. 2ರಂದು ಮಧ್ಯಾಹ್ನ ಪುತ್ತೂರು ಕೆಎಸ್‌ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ಜಗಳ ನಡೆಯುತ್ತಿರುವ ಕುರಿತು ಬಂದ ಖಚಿತ ಮಾಹಿತಿಯಂತೆ ನಗರ ಠಾಣಾ ಪಿಎಸ್‌ಐ ಸುರೇಶ್ ಸಿ.ಟಿ.
ಸಿಬಂದಿ ಜತೆ ಸ್ಥಳಕ್ಕೆ ತೆರಳಿದ್ದು, ಈ ವೇಳೆ ಯುವಕರು ಜಗಳವಾಡುತ್ತಿರುವುದು ಕಂಡುಬಂದಿದೆ.
ಈ ಕುರಿತು ಸ್ಥಳೀಯರಲ್ಲಿ ವಿಚಾರಿಸಿದಾಗ ಜಗಳವಾಡುತ್ತಿರುವ ಯುವಕರ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಸಾರ್ವಜನಿಕ ಸ್ದಳದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿ ಭಂಗವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

