Dailyhunt Logo
  • Light mode
    Follow system
    Dark mode
    • Play Story
    • App Story
Ripponpet: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಒಣ ಮರದ ರೆಂಬೆ; ಸವಾರ ಸಾವು, ಮತ್ತೋರ್ವ ಗಂಭೀರ

Ripponpet: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಒಣ ಮರದ ರೆಂಬೆ; ಸವಾರ ಸಾವು, ಮತ್ತೋರ್ವ ಗಂಭೀರ

ರಿಪ್ಪನ್ ಪೇಟೆ: ಚಲಿಸುತ್ತಿದ್ದ ಬೈಕ್ ಮೇಲೆ ಒಣ ಮರದ ರೆಂಬೆ ಬಿದ್ದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಜು.4ರ ಶನಿವಾರ ನಡೆದಿದೆ.

ಚೋರಡಿ ಗ್ರಾಮದ ಸಂತೋಷ್ (26), ಮೃತರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವೀರಭದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನು ಹಿಡಿಯಲು ಅಗತ್ಯವಾದ ಉಕ್ಕಡವನ್ನು ಬೈಕ್‌ನಲ್ಲಿ ಹೊತ್ತುಕೊಂಡು ಚೋರಡಿಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ತಾರಿಗ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸುಮಾರು 50 ಅಡಿ ಎತ್ತರದಲ್ಲಿದ್ದ ಒಣ ಮರದ ರೆಂಬೆ ಏಕಾಏಕಿ ಬೈಕ್ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ರೆಂಬೆ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಸಂತೋಷ್ ಅವರ ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Udayavani