Dailyhunt Logo
  • Light mode
    Follow system
    Dark mode
    • Play Story
    • App Story
RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಶಿಕ್ಷಕರ ಅಮಾನತು ಖಂಡನೀಯ: ಮಹೇಶ ಟೆಂಗಿನಕಾಯಿ

RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಶಿಕ್ಷಕರ ಅಮಾನತು ಖಂಡನೀಯ: ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನದಲ್ಲಿ ಪಾಲ್ಗೊಂಡ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಕೂಡಲೇ ಅದು ಅಮಾನತು ಆದೇಶ ಹಿಂಪಡೆಯಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ಶುಕ್ರವಾರ (ಆ.28) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವುದು ಸರ್ಕಾರದ ಹೇಡಿತನದ ಕ್ರಮ.

ಸಂಘವು ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಂಘಟನೆಯಾಗಿದ್ದು, ಎಲ್ಲರಿಗೂ ಮುಕ್ತವಾಗಿದೆ. ಸರ್ಕಾರ ಕುಚೇಷ್ಟೆಯಿಂದ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿದೆ. ಅವರ ವಿರುದ್ಧದ ಅಮಾನತು ಆದೇಶ ತಕ್ಷಣ ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಬರದ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಬರಪೀಡಿತ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಮಾಡಿದೆ. ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದೆ. ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಮುಂದಿನ ಹಂಗಾಮಿನ ಬಗ್ಗೆಯೂ ಆತಂಕವಿದೆ. ಇಂತಹ ಸಂದರ್ಭದಲ್ಲಿ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬರಪೀಡಿತ ಪರಿಸ್ಥಿತಿ ಇರುವ ಎಲ್ಲಾ ತಾಲೂಕುಗಳ ಕುರಿತು ಸಮಗ್ರ ವರದಿ ಪಡೆದು ಅವುಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಅನಾವೃಷ್ಟಿಯಿಂದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರಣ ರಾಜ್ಯ ಸರ್ಕಾರವು ಕೇಂದ್ರದ ನೆರವಿಗಾಗಿ ಕಾಯದೆ ಕೂಡಲೇ ರೈತರಿಗೆ ಬರ ಪರಿಹಾರ ಘೋಷಿಸಿ, ಪ್ರತಿ ರೈತರ ಖಾತೆಗೆ 50ಸಾವಿರ ರೂ. ಪರಿಹಾರ ಜಮೆ ಮಾಡಬೇಕೆಂದು ಶಾಸಕ ಟೆಂಗಿನಕಾಯಿ ಒತ್ತಾಯಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Udayavani