Dailyhunt Logo
  • Light mode
    Follow system
    Dark mode
    • Play Story
    • App Story
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ... ಮೂವರು ಶಿಕ್ಷಕಿಯರು ಅಮಾನತು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ... ಮೂವರು ಶಿಕ್ಷಕಿಯರು ಅಮಾನತು

ಉಡುಪಿ : ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ , ಶೈಕ್ಷಣಿಕ ಸಮೀಕ್ಷೆಗೆ ನಿಯೋಜನೆಗೊಂಡಿರುವ ಮೂವರು ಶಿಕ್ಷಕರು ಸಮೀಕ್ಷಾ ಕಾರ್ಯ ನಡೆಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೂವರನ್ನು ಅಮಾನತು ಮಾಡಿದೆ .

ಒಳಕಾಡು ಸ . ಪ್ರೌ . ಶಾಲೆಯ ಶಿಕ್ಷಕಿಯರಾದ ಸುರೇಖಾ , ರತ್ನಾ ಹಾಗೂ ಉದ್ಯಾವರ ಸ . ಪ . ಪೂ . ಕಾಲೇಜು ಸಹ ಶಿಕ್ಷಕಿ ಪ್ರಭಾ ಬಿ . ಅವರು ನೇಮಕಾತಿ ಆದೇಶವನ್ನು ಸ್ವೀಕರಿಸಿರುವುದಿಲ್ಲ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿದರೂ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿದ್ದರ ಹಿನ್ನೆಲೆಯಲ್ಲಿ ಅಮಾನತು ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ .

Dailyhunt
Disclaimer: This content has not been generated, created or edited by Dailyhunt. Publisher: Udayavani