ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದೆದುರಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಯುತ ವಿಚಾರಣೆಗಾಗಿ ಕೋರ್ಟೆದುರು ಸ್ವಯಂಪ್ರೇರಿತನಾಗಿ ಶರಣಾಗಲು ಅನುಮತಿ ಕೋರಿ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಅರ್ಜಿ ಸಲ್ಲಿಸಿದ್ದಾನೆ. ಪ್ರಸ್ತುತ ಅನ್ಮೋಲ್ ತಿಹಾರ್ ಜೈಲಿನಲ್ಲಿದ್ದು, ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಸೋದರ.
ಈತನನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು. ಬಳಿಕ ರಾಷ್ಟ್ರೀಯ ತನಿಖಾ ತಂಡವು ಈತನನ್ನು ಬಂಧಿಸಿತ್ತು. ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಬಳಿ ದಾಳಿ ಸೇರಿದಂತೆ ಹಲವು ಪ್ರಕರಣದಲ್ಲಿ ಅನ್ಮೋಲ್ ಪ್ರಮುಖ ಆರೋಪಿಯಾಗಿದ್ದಾನೆ.

