ಬಾಗಲಕೋಟೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ ಸತೀಶ ಜಾರಕಿಹೊಳಿ ಸಿಎಂ ಆಗ್ತಾರೆ ಎಂದು ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಧಮ್ಮು, ತಾಕತ್ತು ಇದ್ದರೆ ಜಾರಕಿಹೊಳಿ ಅವರು ಮುಂದಿನ ಸಿಎಂ ಎಂದು ಘೋಷಿಸಲಿ ಎಂದು ಮಾಜಿ ಸಚಿವ ರಾಜುಗೌಡ ನಾಯಕ ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಜನರಿಗೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ ಅಂತ ಗೊತ್ತಿದೆ. ಅದನ್ನು ತಿರುಚಿ ಹೇಳಿ ಮತದಾರರಿಗೆ ವಂಚಿಸುತ್ತಿದ್ದಾರೆ. ಸಚಿವ ಸತೀಶ ಜಾರಕಿಹೊಳಿ ಅವರನ್ನು ಸಿದ್ದರಾಮಯ್ಯ ಸಿಎಂ ಮಾಡುವುದಿಲ್ಲ. ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದು ಬಿಜೆಪಿ ಸರ್ಕಾರ. ದಲಿತರಿಗೆ ನ್ಯಾಯ ಕೊಡುವ ಕೆಲಸ ಕಾಂಗ್ರೆಸ್ ಎಂದಿಗೂ ಮಾಡಿಲ್ಲ ಎಂದರು.

