ಬೆಂಗಳೂರು/ಉಡುಪಿ: ಎಂಜಿನಿಯರಿಂಗ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಸೀಟುಗಳನ್ನು ಆನ್ ಲೈನ್ ಮೂಲಕ ರದ್ದುಪಡಿಸಿಕೊಳ್ಳಲು ಆ. 29ರ ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಹಾಗೆಯೇ ಪ್ರವೇಶಕ್ಕೆ ಇದ್ದ ಆ. 28ರ ಗಡುವನ್ನು ಆ. 29ರ ವರೆಗೆ ಚಾಯ್ಸ ದಾಖಲಿಸಲು ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಿ, ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಆ. 31 ಕೊನೆ ದಿನವಾಗಿದೆ.
ವೈದ್ಯಕೀಯ ತಾತ್ಕಾಲಿಕ ಫಲಿತಾಂಶ ಪ್ರಕಟ
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಎರಡನೇ ತಾತ್ಕಾಲಿಕ ಫಲಿತಾಂಶ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.

