ಮಣಿಪಾಲ: ಮಾಹೆ ವಿವಿಯ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ| ಕರುಣಾಕರ್ ಎ. ಕೋಟೆಗಾರ್ ಜು. 1ರಂದು ಅಧಿಕಾರ ಸ್ವೀಕರಿಸಿದರು.
ಈ ವಿಭಾಗದ ಸಹ ಕುಲಪತಿಯಾಗಿ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಡಾ| ನಾರಾಯಣ ಸಭಾಹಿತ್ ಅವರು ವಿ ವಿ ಯ ಸಲಹಾ ಗಾರರಾಗಿ ಕಾರ್ಯ ನಿರ್ವಹಿಸುವರು.
ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾ ಗಿರುವ ಡಾ| ಕರುಣಾಕರ್ ಕೋಟೆಗಾರ್‌ಅವರು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನೆ, ಸಂಶೋಧನೆ, ಶೈಕ್ಷಣಿಕ ನಾಯಕತ್ವ ಮತ್ತು ಅಂತಾರಾಷ್ಟ್ರೀಯ ಸಹಯೋಗಗಳಲ್ಲಿ 29 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. 2024 ರ ಅಕ್ಟೋಬರ್‌ನಿಂದ ಜೈಪುರದ ಮಣಿಪಾಲ ಕ್ಯಾಂಪಸ್‌ನಲ್ಲಿ ಸಹ ಅಧ್ಯಕ್ಷ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಎಂಐಟಿಯ ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿರುವ ಅವರು, ಅಂತಾ ರಾಷ್ಟ್ರೀಯ ಮಟ್ಟದ ಜರ್ನಲ್‌ಗಳಲ್ಲಿ 75ಕ್ಕೂ ಹೆಚ್ಚು ಸಂಶೋಧನ ಪ್ರಬಂಧ ಗಳನ್ನು ಪ್ರಕಟಿಸಿದ್ದಾರೆ. ಒಂಬತ್ತು ಪಿಎಚ್.ಡಿ (ಡಾಕ್ಟರಲ್) ವಿದ್ಯಾ ರ್ಥಿ ಗಳಿಗೆ ಅಲ್ಲದೇ ಹಲವು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರು. ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್ ಸಂಸ್ಥೆಯ ಹಿರಿಯ ಸದಸ್ಯರಾಗಿ, ಇಂಡಿ ಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜು ಕೇಶನ್‌ನ ಆಜೀವ ಸದಸ್ಯರಾ ಗಿದ್ದಾರೆ. ಐಎಎಸ್-ಟಿಇನಲ್ಲಿ ಉನ್ನತ ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿದ್ದರು.

