Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ: ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಇಕ್ಬಾಲ್ ಶೇಖ್ ಬಂಧನ

ಉಡುಪಿ: ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಇಕ್ಬಾಲ್ ಶೇಖ್ ಬಂಧನ

ಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್‌ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.

ಇಕ್ಬಾಲ್‌ನನ್ನು ಆ.13ರಂದು ಬಂಧಿಸಲಾಗಿದ್ದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ, ಮಂಗಳೂರು ಬಂಧನ ಆದೇಶ ಹೊರಡಿಸಿದ್ದರು.

ಏಳು ಪ್ರಕರಣ ದಾಖಲು
ಬಂಧಿತ ಇಕ್ಬಾಲ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಸೇರಿದಂತೆ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಐದು ಪ್ರಕರಣಗಳಿದ್ದರೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಎರಡು ಪ್ರಕರಣಗಳಿವೆ.

ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಐದು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಇಕ್ಬಾಲ್‌ನನ್ನು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Udayavani