ಉಡುಪಿ, ಅ.27: ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿಯ ಸಹಕಾರದಲ್ಲಿ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ಶಿಬಿರವು ಆದಿಉಡುಪಿಯ ಮಸ್ಜಿದ್ ಎ ನೂರುಲ್ ಇಸ್ಲಾಮ್ ನ ಆವರಣದಲ್ಲಿ ರವಿವಾರ ಜರುಗಿತು.
ಒಕ್ಕೂಟದ ಉಡುಪಿ ತಾಲೂಕು ಅಧ್ಯಕ್ಷ ನಝೀರ್ ಸಾಹೇಬ್ ನೇಜಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವು ಆದಿಉಡುಪಿಯ ಮಸ್ಜಿದ್ ಎ ನೂರುಲ್ ಇಸ್ಲಾಮ್ ಖತೀಬ್ ಮುಫ್ತಿ ಮುಹಮ್ಮದ್ ಸುಹೈಲ್ ಅವರ ಕಿರಾಅತ್ ನೊಂದಿಗೆ ಪ್ರಾರಂಭಗೊಂಡಿತು.
ಒಕ್ಕೂಟದ ಜಿಲ್ಲಾಧ್ಯಕ್ಷ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಉಡುಪಿಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕಿ ಡಾ. ತೇಜಸ್ವಿನಿ ಎ. ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ವಿವರಿಸಿದರು. ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಸಮೀ ಹಳಗೇರಿ ಎನ್.ಎಸ್.ಪಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉಸ್ತಾದ್ ಜಮಾಲ್ ಮಲ್ಪೆ, ಜಿಲ್ಲಾ ಸಮಿತಿಯ ಸದಸ್ಯರಾದ ಫಾಝಿಲ್ ಅಹ್ಮದ್ ಆದಿಉಡುಪಿ, ಮಸೀದಿಯ ಕಾರ್ಯದರ್ಶಿ ಮುಹಮ್ಮದ್ ಶಮೀರ್, ತಾಲೂಕು ಕಾರ್ಯದರ್ಶಿ ಸಮೀರ್ ಮೊದಲಾದವರು ಉಪಸ್ಥಿತರಿದ್ದರು.
ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಜಮಾಅತ್ ಬಾಂಧವರು ಭಾಗವಹಿಸಿ ಆಯುಷ್ಮಾನ್ ಕಾರ್ಡ್ ಹಾಗೂ ಎನ್.ಎಸ್.ಪಿ. ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಪಡೆದರು.
ಜಿಲ್ಲಾ ಉಪಾಧ್ಯಕ್ಷ ಎಸ್.ಎಂ. ಇರ್ಷಾದ್ ಸಾಹೇಬ್ ನೇಜಾರ್ ವಂದಿಸಿದರು.




