Dailyhunt
ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಕುಂದಾಪುರ, ಎ.3: ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.3ರಂದು ಸಂಜೆ ವೇಳೆ ತಲ್ಲೂರು ಗ್ರಾಮದ ಕೋಟೆಬಾಗಿಲು ಎಂಬಲ್ಲಿ ನಡೆದಿದೆ.

ಮೃತರನ್ನು ತಲ್ಲೂರು ಗ್ರಾಮದ ಕೋಟೆಬಾಗಿಲು ನಿವಾಸಿ ಶಶಿಕಲಾ(20) ಎಂದು ಗುರುತಿಸಲಾಗಿದೆ. ಕುಂದಾಪುರ ಆಸ್ಪತ್ರೆಯಲ್ಲಿ ಕ್ಲಿನಿಂಗ್ ಕೆಲಸ ಮಾಡಿಕೊಂಡಿದ್ದ ಶಶಿಕಲಾ ಸುಮಾರು ಒಂದು ವರ್ಷದ ಹಿಂದೆ ಮಂಜುನಾಥ ಎಂಬಾತನನ್ನು ಪ್ರೀತಿಸುತ್ತಿದ್ದರು.

ಈ ವಿಚಾರ ಆಕೆಯ ಮನೆಯವರಿಗೆ ತಿಳಿದಿತ್ತು.

ಎ.3ರಂದು ಶಶಿಕಲಾ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದು ಸಂಜೆ ವೇಳೆ ಮನೆಯಲ್ಲಿ ಕಾಣದೇ ನಾಪತ್ತೆಯಾಗಿದ್ದರು. ಹುಡುಕಾಡಿದಾದ ರಾತ್ರಿ ವೇಳೆ ಮನೆ ಸಮೀಪದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi