Dailyhunt
ಬಸವ ಜಯಮೃತ್ಯುಂಜಯ  ಸ್ವಾಮೀಜಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ

ಬೆಂಗಳೂರು : ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧಿಪತಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ‌ನಿರ್ಬಂಧಿಸಿ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ಪ್ರತಿಬಂಧಕಾದೇಶ ಮಾಡಿದೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಸಾರ, ಪ್ರಕಟಣೆ ಮತ್ತು ಹಂಚಿಕೆ ಮಾಡದಂತೆ ಶಾಶ್ವತ ಪ್ರತಿಬಂಧಕಾದೇಶ ಮಾಡಬೇಕು ಎಂದು ಅಸಲು ದಾವೆ ಸಲ್ಲಿಸಿದ್ದು, ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸುವಂತೆ ಮಧ್ಯಂತರ ಮನವಿ ಮಾಡಿದ್ದರು.

ಈ ಮನವಿಯನ್ನು 30ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎನ್‌.ಆರ್‌. ಮಧು ಅವರು ಪುರಸ್ಕರಿಸಿದ್ದಾರೆ.

ಸ್ವಾಮೀಜಿ ಅವರ ದಾವೆಯಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆ, ಗ್ಯಾರಂಟಿ ಸುದ್ದಿ ವಾಹಿನಿ, ಸೌಖ್ಯಾ ಗಾಂವ್ಕರ್‌, ವಿಜಯವಾಹಿನಿ ನ್ಯೂಸ್‌, ಮೆಟಾ ಮತ್ತು ಯೂಟ್ಯೂಬ್‌ಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi