ಮೈಸೂರು, ಜು.31: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಆಷಾಢ ಮಾಸದ ಮೂರನೇ ಶುಕ್ರವಾರವಾದ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಶ್ರೀ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಈಗಾಗಲೇ ರಾಜ್ಯದ ಜನರಿಗೆ ಅನ್ಯಾಯವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡುವುದು ಸರಿಯಲ್ಲ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ರಾಜ್ಯದ ಜನರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದರು.

