Dailyhunt Logo
  • Light mode
    Follow system
    Dark mode
    • Play Story
    • App Story
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಇಬ್ರಾಹೀಂ ಖಲೀಲುಲ್ಲಾ ನೇಮಕ

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಇಬ್ರಾಹೀಂ ಖಲೀಲುಲ್ಲಾ ನೇಮಕ

ದಾವಣಗೆರೆ : ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಬ್ರಾಹೀಂ ಖಲೀಲುಲ್ಲಾ ನೇಮಕಗೊಂಡಿದ್ದಾರೆ.

ಈ ಹಿಂದೆ ಎಚ್.ಬಿ.ಮಂಜಪ್ಪರಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್ ವರಿಷ್ಠರು ವಕೀಲ ಹಾಗೂ ಯುವ ಮುಖಂಡ ಇಬ್ರಾಹೀಂ ಖಲೀಲುಲ್ಲಾ ಅವರನ್ನು ಆಯ್ಕೆ ಮಾಡಿದೆ.

ಸಂಘಟನಾ ಅನುಭವ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ವೀಕ್ಷಕ, ಸಂಘಟನ್ ಸೃಜನ್ ಅಭಿಯಾನ, ತೆಲಂಗಾಣ ವಿಧಾನಸಭಾ ಚುನಾವಣೆ-2023 ಎಐಸಿಸಿ ವೀಕ್ಷಕ, ಭಾರತ್ ಜೋಡೋ ಯಾತ್ರೆ ಸಂಯೋಜಕ, ಭಾರತೀಯ ಯುವ ಕಾಂಗ್ರೆಸ್ ಸೇರಿದಂತೆ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ ಅನುಭವಿಯಾಗಿದ್ದಾರೆ.

ಶಿಕ್ಷಣ: ದಾವಣಗೆರೆ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದಾರೆ.

ಈ ಕುರಿತು ಮಾತನಾಡಿದ ಇಬ್ರಾಹೀಂ ಖಲೀಲುಲ್ಲಾ, ''ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಸವಂತಪ್ಪ ಹಾಗೂ ಶಾಸಕರು ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರ ಆರ್ಶೀವಾದದಿಂದ ಪಕ್ಷದ ವರಿಷ್ಠರು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿರುವುದು ತುಂಬ ಸಂತಸ ಉಂಟು ಮಾಡಿದೆ'' ಎಂದರು.

''ಜಿಲ್ಲೆಯಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಸಂಘಟನೆ ಮಾಡಲಾಗುವುದು. ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮ ವಹಿಸಲಾಗುವುದು. 2028ರ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಸಂಘಟನೆ ಮಾಡಲಾಗುವುದು'' ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi