Dailyhunt
ಡಿಸಿಇಟಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಡಿಸಿಇಟಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು : ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಎ.10ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಶುಲ್ಕ ಪಾವತಿಗೂ ಎ.10 ಕೊನೆ ದಿನವಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್ ಸೈಟ್ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi