Dailyhunt Logo
  • Light mode
    Follow system
    Dark mode
    • Play Story
    • App Story
ಡ್ರಗ್ಸ್ ದಂಧೆ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಸೆ.18ರವರೆಗೆ ನ್ಯಾಯಾಂಗ ಬಂಧನ

ಡ್ರಗ್ಸ್ ದಂಧೆ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಸೆ.18ರವರೆಗೆ ನ್ಯಾಯಾಂಗ ಬಂಧನ

ಫೈಲ್ ಫೋಟೋ

ಬೆಂಗಳೂರು, ಸೆ.16: ಸ್ಯಾಂಡಲ್‍ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ಸಂಜನಾ ಗಲ್ರಾನಿಗೆ ಸೆ.18ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ನಗರದ 1ನೆ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಡ್ರಗ್ಸ್ ದಂಧೆ ಆರೋಪ ಸಂಬಂಧ ಸಂಜನಾರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಬುಧವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸಂಜನಾರನ್ನು ನ್ಯಾಯಾಲಯಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಸಂಜನಾಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ ಹಿನ್ನೆಲೆ ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು. ಸೆ.18ರವರೆಗೆ ಸಂಜನಾ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ ಎಂದು ಸಿಸಿಬಿ ತಿಳಿಸಿದೆ.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗುತ್ತದೆ.

ಜೊತೆಗೆ ಆರೋಪಿ ಸಾಮಾನ್ಯ ಕೈದಿಯಂತೆ ಜೈಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಿಳಾ ಬ್ಯಾರಕ್‍ನಲ್ಲಿ ಸಂಜನಾ ತಂಗಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪ್ರಕರಣ ಎನ್‍ಡಿಪಿಎಸ್ ಕೋರ್ಟ್‍ಗೆ ವರ್ಗಾವಣೆ: ಡ್ರಗ್ಸ್ ಪ್ರಕರಣ ಸಂಬಂಧ ಸಂಜನಾರನ್ನು ಸೆ.18ರಂದು ಸಿಸಿಎಚ್ 33-ಎನ್‍ಡಿಪಿಎಸ್ ವಿಶೇಷ ಕೋರ್ಟ್‍ಗೆ ಹಾಜರುಪಡಿಸಲು 1ನೆ ಎಸಿಎಂಎಂ ಕೋರ್ಟ್ ಸೂಚನೆ ನೀಡಿತು. ಸಂಜನಾ ಜಾಮೀನು ಅರ್ಜಿ ವಿಚಾರಣೆಯೂ ಎನ್‍ಡಿಪಿಎಸ್ ಕೋರ್ಟ್ ನಲ್ಲಿಯೇ ನಡೆಯಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi