Dailyhunt
ಎ.9ರಿಂದ ಮಂಗಳೂರು ವಿವಿ ಅಂತರ ವಿವಿ ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್

ಎ.9ರಿಂದ ಮಂಗಳೂರು ವಿವಿ ಅಂತರ ವಿವಿ ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್

ಡುಪಿ, ಎ.8: ಮಂಗಳೂರು ವಿವಿ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕಬಡ್ಡಿ ಟೂರ್ನಿ ಎ.9 ಹಾಗೂ 10ರಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.

ಟೂರ್ನಿಯನ್ನು ಅದಮಾರು ಮಠಾಧೀಶರಾದ ಬೆಂಗಳೂರಿನ ಯುಎಸ್‌ಎಎಂಇಸಿ ಅಧ್ಯಕ್ಷ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಬೆಳಗ್ಗೆ 10ಗಂಟೆಗೆ ಉದ್ಘಾಟಿಸಲಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಅದಮಾರು ಮಠ ಶಿಕ್ಷಣ ಟ್ರಸ್ಟ್‌ನ ಡಾ.ಎ.ಪಿ.ಭಟ್, ಡಾ.ಜಿ.ಎಸ್. ಚಂದ್ರಶೇಖರ್, ಪ್ರಶಾಂತ್ ಹೊಳ್ಳ, ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಮು ಎಲ್. ಉಪಸ್ಥಿತರಿರುವರು.

ಸಮಾರೋಪ ಸಮಾರಂಭ ಎ.10ರಂದು ಅಪರಾಹ್ನ 3ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಮೋದ್ ಮಧ್ವರಾಜ್, ವಿನಯಕುಮಾರ ಸೊರಕೆ, ಡಾ.ಎ.ಪಿ.ಭಟ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi