ಕುಂದಾಪುರ, ನ.24: ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗಂಗೊಳ್ಳಿ ಗ್ರಾಪಂ ನಿಯೋಗ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತು ಕುಂದಾಪುರ ತಾಪಂ ಇಒ ಮಹೇಶ ಕೆ.ಜಿ.
ಅವರನ್ನು ಸೋಮವಾರ ಮನವಿ ಸಲ್ಲಿಸಿತು.
ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆ ಯಾಗಬೇಕಾದ 15 ನೇ ಹಣಕಾಸಿನ ಬಾಕಿ ಹಣ ಹಾಗೂ 16 ನೇ ಹಣಕಾಸಿನ ಹೊಸ ಅನುದಾನಗಳು ಕಳೆದ ಎರಡು ವಷರ್ಗಳಿಂದ ಪಂಚಾಯತ್‌ಗೆ ಬಿಡುಗಡೆಯಾಗಿಲ್ಲ. ಇದರಿಂದ ಪಂಚಾಯತ್ ತೀವ್ರ ಆರ್ಥಿಕ ಮುಗ್ಗಟ್ಟು ಅನುಭಸುತ್ತಿದ್ದು ಇದರಿಂದ ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯ ನೀಡಲು ಅಸಾಧ್ಯ ವಾಗಿದೆ. ಚರಂಡಿ ಸ್ವಚ್ಛತೆ, ಬೀದಿ ದೀಪ ಹಾಗೂ ರಸ್ತೆ ದುರಸ್ತಿ ಕಾಮಗಾರಿ ಸ್ಥಗಿತಗೊಂಡಿದೆ. ಅಭಿವೃದ್ಧಿ ಕಾಮಗಾರಿಗಳು ನಡೆಯದ ಕಾರಣ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದೆ.
ಆದ್ದರಿಂದ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಗ್ರಾಮಸ್ಥರ ಹಿತದೃಷ್ಟಿಯಿಂದ ಚರಂಡಿ ಸ್ವಚ್ಛತೆ, ಬೀದಿ ದೀಪ ನಿರ್ವಹಣೆ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ ವೇತನ ಹಾಗೂ ಇಂಧನದ ನಿರ್ವಹಣೆಗೆ ಉಡುಪಿ ಜಿಲ್ಲಾ ಪಂಚಾಯತ್‌ನ ವಿಶೇಷ ತುರ್ತು ಪರಿಹಾರ ನಿಧಿಯಿಂದ ತಕ್ಷಣವೇ ಅನುದಾನ ಒದಗಿಸಬೇಕೆಂದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅನುದಾನ ಬಿಡುಗಡೆ ಆಗದಿದ್ದಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಪ್ರತಿಭಟನೆ ನಡೆಸುವುದಾಗಿ ನಿಯೋಗ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜಯಂತಿ ರ್ಖಾ, ಉಪಾಧ್ಯಕ್ಷ ತಬ್ರೇಜ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
್ಠ

