Dailyhunt Logo
  • Light mode
    Follow system
    Dark mode
    • Play Story
    • App Story
Hanur | ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Hanur | ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಹನೂರು : ತಾಲ್ಲೂಕಿನ ಎಲ್ಲೆಮಾಳ ರಸ್ತೆಯ ಅರಣ್ಯ ಪ್ರದೇಶದಲ್ಲಿ ಸುಮಾರು 40 ವರ್ಷದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಮೃತ ವ್ಯಕ್ತಿಯ ಗುರುತು ಹಾಗೂ ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದ್ದು, ಹನೂರು ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi