ವಾಷಿಂಗ್ಟನ್: ಇರಾನ್ ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶಗಳ ಮೇಲೆ 50% ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಟೆಹ್ರಾನ್ ಜೊತೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಂದವಾದ ನಂತರದ ದಿನವೇ ಸಾಮಾಜಿಕ ಜಾಲತಾಣದ ಮೂಲಕ ಈ ಘೋಷಣೆ ಮಾಡಿರುವ ಅವರು, ಈ ಕ್ರಮಕ್ಕೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಕ್ಷಣದಿಂದಲೇ ಸುಂಕ ಜಾರಿಗೆ ಬರುತ್ತದೆ ಎಂದೂ ಹೇಳಿದ್ದಾರೆ.
ಇರಾನ್ ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಇತ್ತೀಚಿನ ಉದ್ವಿಗ್ನತೆಯ ನಡುವೆ ಈ ಘೋಷಣೆ ಮಹತ್ವ ಪಡೆದಿದೆ.
ಈ ಕ್ರಮವು ಅಂತರರಾಷ್ಟ್ರೀಯ ವ್ಯಾಪಾರ ಹಾಗೂ ರಾಜತಾಂತ್ರಿಕ ಸಂಬಂಧಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

