Dailyhunt Logo
  • Light mode
    Follow system
    Dark mode
    • Play Story
    • App Story
ಜು. 25ರಂದು ಉಡುಪಿ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ: ಡಿಸಿ ಸ್ವರೂಪ ಟಿ.ಕೆ.

ಜು. 25ರಂದು ಉಡುಪಿ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ: ಡಿಸಿ ಸ್ವರೂಪ ಟಿ.ಕೆ.

ಡುಪಿ, ಜು.24: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನ ತೀವ್ರ ಮಳೆಯ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜುಲೈ 25ರ ಶನಿವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಮತ್ತು ಐಟಿಐ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi