Dailyhunt Logo
  • Light mode
    Follow system
    Dark mode
    • Play Story
    • App Story
ಕಾರ್ಕಳ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಕಬ್ಸ್, ಬುಲ್ ಬುಲ್ ಘಟಕ ಉದ್ಘಾಟನೆ

ಕಾರ್ಕಳ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಕಬ್ಸ್, ಬುಲ್ ಬುಲ್ ಘಟಕ ಉದ್ಘಾಟನೆ

ಕಾರ್ಕಳ : ಕಾರ್ಕಳ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆ ಭಾರತ್ ಸ್ಕೌಟ್ ಮತ್ತು ಗೈಡ್ ಇದರ ಕಬ್ಸ್ ಮತ್ತು ಬುಲ್ ಬುಲ್ ನೂತನ ಘಟಕದ ಉದ್ಘಾಟನಾ ಸಮಾರಂಭವು ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಭಾರತ್ ಸ್ಕೌಟ್ಸ್ ಗೈಡ್ಸ್ ಕಾರ್ಕಳ ಘಟಕದ ಅಧ್ಯಕ್ಷೆ ಜ್ಯೋತಿ ಜೆ.

ಪೈ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಬ್ಸ್ ಮತ್ತು ಬುಲ್ ಬುಲ್ ಮಕ್ಕಳು ವೇದಿಕೆಯಲ್ಲಿ ಉಪಸಿತರಿದ್ದರು.

ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಜೀವನದಲ್ಲಿ ಶಿಸ್ತು ಮತ್ತು ದೇಶಪ್ರೇಮ ಮೂಡಿಸುವಲ್ಲಿ ಸ್ಕೌಟ್ಸ್ ಗೈಡ್ಸ್ ಸಹಕಾರಿಯಾಗಿದೆ. ಇದು ವಿದ್ಯಾರ್ಥಿಗಳ ಎಳೆಯ ವಯಸ್ಸಿನಲ್ಲೇ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು. ಬಳಿಕ ಅಭಿನಯ ಗೀತೆಯ ಮೂಲಕ ವಿದ್ಯಾರ್ಥಿಗಳು ಮನ ರಂಜಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸಂಚಾಲಕ ನರೇಂದ್ರ ಕಾಮತ್ ಕೆ. ಮಾತಾಡುತ್ತಾ, ಭಾರತ್ ಸ್ಕೌಟ್ಸ್ ಗೈಡ್ಸ್ ಚಳುವಳಿಯು ಇಂದು ವಿದ್ಯಾರ್ಥಿಗಳಿಗೆ ನಾಯಕತ್ವ , ಸ್ವಾವಲಂಬನೆ ಬದುಕು ಮತ್ತು ಪ್ರಕೃತಿ ಬಗ್ಗೆ ಪ್ರೀತಿಯನ್ನು ಮೂಡಿಸುವ ಬಗೆಯನ್ನು ಹೇಳಿಕೊಡುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಒಳ್ಳೆಯ ಮುನ್ನುಡಿಯನ್ನು ಬರೆಸಿದಂತೆ ಎಂದು ಹೇಳಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು

ಕಾರ್ಕಳ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್ ಅವರು, ಮಕ್ಕಳಿಗೆ ನೀತಿಯುತ ಮೌಲ್ಯದ ಕಥೆಗಳನ್ನು ಹೇಳಿದರು. ಸ್ಥಳೀಯ ಸಂಸ್ಥೆ ಸಹಾಯಕ ಜಿಲ್ಲಾ ಕಮಿಷನರ್ ಬೋಳ ಗೀತಾ ಸುಧೀರ್ ಕಾಮತ್, ಶ್ರೀಮದ್ ಭುವನೇಂದ್ರ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ , ಗೈಡ್ ಶಿಕ್ಷಕಿ, ಕಾರ್ಕಳ ಘಟಕದ ಜೊತೆ ಕಾರ್ಯದರ್ಶಿ ಸೀಮಾ ಕಾಮತ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಸಹಾಯಕ ಜಿಲ್ಲಾ ಕಮಿಷನರ್ ವಿದ್ಯಾ ಕಿಣಿ ಅವರು ಸ್ವಾಗತಿಸಿದರು. ಸ್ಕೌಟ್ ಶಿಕ್ಷಕ ಕಾರ್ಕಳ ಘಟಕದ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ರಂಜಿತಾ ಕಬ್ಸ್‌, ಬುಲ್ ಬುಲ್ ನಿಯಮವನ್ನು ವಾಚಿಸಿದರು.

ಶಿಕ್ಷಕಿ ಸವಿತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ವೇತಾ ಭಟ್ ಧನ್ಯವಾದವಿತ್ತರು. ಶಿಕ್ಷಕಿ ಸ್ನೇಹ ಲೋನ್ಡೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಕಬ್ಸ್‌, ಬುಲ್ ಬುಲ್ ಶಿಕ್ಷಕರು, ವಿದ್ಯಾರ್ಥಿ ಪೋಷಕರು, ಶಾಲಾ ಶಿಕ್ಷಕರು, ಶಿಕ್ಷಕೇತರ ಬಂಧುಗಳು ಉಪಸ್ಥಿತರಿದ್ದರು.

ಕೊನೆಯಲ್ಲಿ ಐಕ್ಯ ಮಂತ್ರ ಮೂಲಕ ಕಾರ್ಯಕ್ರಮ ಸಮಾಪನಗೊಂಡಿತು.

Dailyhunt
Disclaimer: This content has not been generated, created or edited by Dailyhunt. Publisher: Varthabharathi