Dailyhunt Logo
  • Light mode
    Follow system
    Dark mode
    • Play Story
    • App Story
ಕಾರು ಢಿಕ್ಕಿ: ಪಾದಚಾರಿ ಮೃತ್ಯು

ಕಾರು ಢಿಕ್ಕಿ: ಪಾದಚಾರಿ ಮೃತ್ಯು

ಕೋಟ, ಜೂ.1: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.1ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಗಣೇಶ್ ಕರ್ಕೇರ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟಲು ಡಿವೈಡರ್ ಬಳಿ ನಿಂತುಕೊಂಡಿದ್ದ ಗಣೇಶ ಕರ್ಕೇರ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಕರ್ಕೇರ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi