Dailyhunt
‌ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

‌ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್-ಕರ್ನಾಟಕದ ವತಿಯಿಂದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ 'ಗುಲಬರ್ಗಾ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್‍ಗೆ ಭಾಜನರಾಗಿರುವ ಪಿ.ಜಿ.ಆರ್.ಸಿಂಧ್ಯ ಅವರಿಗೆ ಅಭಿನಂದನಾ ಸಮಾರಂಭ'ದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂತೋಷ್ ಹೆಗ್ಡೆಯವರು, ಕೆಲವೇ ನಿಮಿಷದ ಭಾಷಣದ ಮುಗಿಸಿ ವೇದಿಕೆಯಲ್ಲಿ ಕುಳಿತುಕೊಂಡಿದ್ದರು. ಆರೋಗ್ಯದಲ್ಲಿ ಏರುಪೇರು ಆಗಿದೆ (ತಲೆ ಸುತ್ತು ಬಂದು) ಎಂದು ನಿರ್ಗಮಿಸುವ ಸಂದರ್ಭದಲ್ಲಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿರುವ ಘಟನೆ ನಡೆಯಿತು.

ಕೆಲ ಕಾಲ ಸಭಾಂಗಣದಲ್ಲಿ ಗೊಂದಲವುಂಟಾಗಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಆತಂಕಕ್ಕೆ ಒಳಗಾದರು. ಘಟನೆಯ ವೇಳೆ ವೇದಿಕೆಯಲ್ಲಿದ್ದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಕ್ಷಣವೇ ಸ್ಪಂದಿಸಿ, ತಮ್ಮ ಕಾರಿನಲ್ಲಿ ಸಂತೋಷ್‌ ಹೆಗ್ಡೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi