Dailyhunt Logo
  • Light mode
    Follow system
    Dark mode
    • Play Story
    • App Story
ಕಲಬುರಗಿ| ಜೀವ ಬೆದರಿಕೆ ಆರೋಪ: ಸೆಂಟ್ರಿಂಗ್ ಕಾಂಟ್ರಾಕ್ಟರ್ ಆತ್ಮಹತ್ಯೆ

ಕಲಬುರಗಿ| ಜೀವ ಬೆದರಿಕೆ ಆರೋಪ: ಸೆಂಟ್ರಿಂಗ್ ಕಾಂಟ್ರಾಕ್ಟರ್ ಆತ್ಮಹತ್ಯೆ

ಲಬುರಗಿ: ಜೀವ ಬೆದರಿಕೆಯಿಂದ ಮನನೊಂದು ಸೆಂಟ್ರಿಂಗ್ ಕಾಂಟ್ರಾಕ್ಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಗುರುವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ರಟಕಲ್ ಗ್ರಾಮದ ನಿವಾಸಿ ಖದೀರ್ ಪಾಶಾ (40) ಮೃತ ವ್ಯಕ್ತಿ.

ಕಾಂಗ್ರೆಸ್‌ ಮುಖಂಡ ಅರವಿಂದ್ ಚೌಹಾಣ್ ಹಾಗೂ ಅಮಿತ್ ರಾಠೋಡ್ ಎಂಬವರಿಂದ ಜೀವ ಬೆದರಿಕೆ ಎದುರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಅನೀಸಾ ಬೇಗಂ ರಟಕಲ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Dailyhunt
Disclaimer: This content has not been generated, created or edited by Dailyhunt. Publisher: Varthabharathi