Dailyhunt
Kalaburagi | ಮಾರಕಾಸ್ತ್ರಗಳಿಂದ ಕೊಚ್ಚಿ ವಕೀಲನ ಕೊಲೆ

Kalaburagi | ಮಾರಕಾಸ್ತ್ರಗಳಿಂದ ಕೊಚ್ಚಿ ವಕೀಲನ ಕೊಲೆ

ಲಬುರಗಿ: ಹಳೆಯ ಜೇವರ್ಗಿ ರಸ್ತೆಯಲ್ಲಿ ಗುರುವಾರ ಸಂಜೆ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಖಾಸಗಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಹಾಗೂ ವಕೀಲನಾಗಿದ್ದ ಅನಿಲ್ ರಾಠೋಡ್ (45) ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಆಯುಕ್ತ ಶರಣಪ್ಪ ಎಸ್.ಡಿ ಅವರು, ಹರಿತವಾದ ಆಯುಧಗಳಿಂದ ಅನಿಲ್ ರಾಠೋಡ್ ಅವರನ್ನು ಕೊಲೆ ಮಾಡಲಾಗಿದೆ. ಅವರು ಖಾಸಗಿ ಫೈನಾನ್ಸ್ ಜೊತೆಗೆ ವಕೀಲ ವೃತ್ತಿಯಲ್ಲಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಎಸಿಪಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi