Dailyhunt Logo
  • Light mode
    Follow system
    Dark mode
    • Play Story
    • App Story
ಕಲ್ಸಂಕ ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವರು

ಕಲ್ಸಂಕ ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವರು

ಉಡುಪಿ, ನ.24: ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಅವರು ಇಂದು ನಗರ ಭೇಟಿಯ ಸಂದರ್ಭದಲ್ಲಿ ಅತಿ ಹೆಚ್ಚು ಟ್ರಾಫಿಕ್ ಝಾಮ್ ಹಾಗೂ ಅಪಘಾತ ಸಂಭವಿಸುವ ಕಲ್ಸಂಕ ಜಂಕ್ಷನ್‌ನಲ್ಲಿ ಅಫಘಾತ ವಲಯದ ಸ್ಥಳ ಹಾಗೂ ನಗರ ಟ್ರಾಫಿಕ್ ವ್ಯವಸ್ಥೆಯನ್ನು ಸುಗಮಗೊಳಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಮುಖಂಡ ರಾದ ವಿನಯ್ ಕುಮಾರ್ ಸೊರಕೆ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi