Dailyhunt
ಕಂಬಳಪದವಿನಲ್ಲಿ ಭೀಕರ ಅಪಘಾತ: ಬೈಕ್‌ ಸವಾರನಿಗೆ ಗಂಭೀರ ಗಾಯ

ಕಂಬಳಪದವಿನಲ್ಲಿ ಭೀಕರ ಅಪಘಾತ: ಬೈಕ್‌ ಸವಾರನಿಗೆ ಗಂಭೀರ ಗಾಯ

ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕೊಂದಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಬೇಬಿ ಎಂಬವರ ಪುತ್ರ ಸುಶಾಂತ್ (23 ) ಎಂದು ಗುರುತಿಸಲಾಗಿದೆ.

ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭ ತಲೆಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಟ್ ಆಂಡ್ ರನ್; ಲಾರಿ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi