Dailyhunt
ಕನಕಗಿರಿ | ಗಣತಿದಾರರಿಗೆ ತರಬೇತಿ: ಮನೆ ಮನೆಗೆ ಮಾಹಿತಿ ಸಂಗ್ರಹಕ್ಕೆ ಸೂಚನೆ

ಕನಕಗಿರಿ | ಗಣತಿದಾರರಿಗೆ ತರಬೇತಿ: ಮನೆ ಮನೆಗೆ ಮಾಹಿತಿ ಸಂಗ್ರಹಕ್ಕೆ ಸೂಚನೆ

ನಕಗಿರಿ : ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಉಸ್ತುವಾರಿ ಅಧಿಕಾರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಮಾತನಾಡಿ, 2026ರ ಅಂದಾಜು ಪ್ರಕಾರ ಪಟ್ಟಣದ ಜನಸಂಖ್ಯೆ 19,942 ಇದೆ.

ಒಟ್ಟು 35 ಗಣತಿದಾರರು ಹಾಗೂ 6 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು, ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಿದರು.

ತರಬೇತಿದಾರ ಜಯಪ್ರಕಾಶ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೀವ್ ಎಂ.ಆರ್ ತರಬೇತಿ ನೀಡಿದರು. ನೋಡಲ್ ಅಧಿಕಾರಿ ಸೋಮಶೇಖರಗೌಡ ಕಾರ್ಯಕ್ರಮಕ್ಕೆ ಭೇಟಿ ನೀಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi