Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿರುವ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಅವರನ್ನು ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪ್ರಕಟಿಸಲಾಗಿದೆ.

ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, 'ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ.ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿ' ಆದೇಶ ಹೊರಡಿಸಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜೂ.1ರಂದು ಚುನಾವಣೆಯ ಅಧಿಸೂಚನೆ ಪ್ರಕಟಿಸಿದ್ದು, ಜೂ.8ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂ.18ಕ್ಕೆ ಚುನಾವಣೆ ನಡೆಯಲಿದೆ. ವಿಧಾನಸಭೆಯ ಈಗಿನ ಸಂಖ್ಯಾಬಲದ ಪ್ರಕಾರ ಕಾಂಗ್ರೆಸ್ ಪಕ್ಷವು ನಾಲ್ಕು ಸ್ಥಾನಗಳನ್ನು ಗೆಲ್ಲಲು ಅವಕಾಶವಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi