Dailyhunt Logo
  • Light mode
    Follow system
    Dark mode
    • Play Story
    • App Story
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ

ಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನಡೆಸಿದ ಸಮೀಕ್ಷೆಯಲ್ಲಿ ಧರ್ಮಜ ಉತ್ತಪ್ಪರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ನಾಪಂಡ ಮುತ್ತಪ್ಪ ಹಾಗೂ ಕೆ.ಎಂ.ಲೋಕೇಶ್ ಸ್ಪರ್ಧೆಯಲ್ಲಿದ್ದರು.

ಅಂತಿಮವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಹುಮತದ ಅಭಿಪ್ರಾಯದ ಆಧಾರದ ಮೇಲೆ ಧರ್ಮಜ ಉತ್ತಪ್ಪರನ್ನು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

2023ರಲ್ಲಿ ಧರ್ಮಜ ಉತ್ತಪ್ಪ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನೇತೃತ್ವಕ್ಕೆ ಪಕ್ಷದೊಳಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಇದೀಗ ಮತ್ತೊಮ್ಮೆ ಜಿಲ್ಲಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

ಪುನರಾಯ್ಕೆಯ ಕುರಿತು ಹರ್ಷ ವ್ಯಕ್ತಪಡಿಸಿರುವ ಧರ್ಮಜ ಉತ್ತಪ್ಪ, ತನ್ನ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದೇ ವೇಳೆ ಜಿಲ್ಲಾಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದ ಇಬ್ಬರು ಹಿರಿಯ ಮುಖಂಡರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಧರ್ಮಜ ಉತ್ತಪ್ಪರ ಪುನರಾಯ್ಕೆಯನ್ನು ಸ್ವಾಗತಿಸಿದ್ದು, ಹೈಕಮಾಂಡ್ನ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi