Dailyhunt

ಕೋವಿಡ್-19 ರೋಗಿಗಳಿಗೆ ಚಿಕಿತ್ಸಾ ಸೌಲಭ್ಯದ ಮಾಹಿತಿ

ಉಡುಪಿ, ಮೇ 15: ಕೋವಿಡ್-19 ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ.

ಜಿಲ್ಲೆಯ ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ. ಸರಕಾರಿ ಕೋಟಾದ ರೋಗಿಗಳಿಗೆ ರೆಮ್‌ಡಿಸಿವರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ.

ಕೋವಿಡ್ ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಕೊಂಡಲ್ಲಿ, ಸರಕಾರ ನಿಗದಿಪಡಿಸಿರುವ ಜನರಲ್ ವಾರ್ಡ್‌ಗೆ 10,000 ರೂ., ಐಸೋಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15,000 ರೂ., ಹೆಚ್‌ಡಿಯು 12,000 ರೂ., ಐಸೋಲೇಷನ್ ಐಸಿಯು ವೆಂಟಿಲೇಟರ್ ಸಹಿತ 25,000 ರೂ., ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ.

ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿ ಕೊಳ್ಳಲು ನಿರಾಕರಿಸಿದ್ದಲ್ಲಿ, ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ ಟೋಲ್ ಫ್ರೀ ಸಂಖ್ಯೆ:1800 425 8330 ಗೆ ಹಾಗೂ 1912 ಗೆ ಕರೆ ಮಾಡಿ, ಅಥವಾ ಇ-ಮೇಲ್ -sastgrievance@gmail.com-ಗೆ ದೂರು ಸಲ್ಲಿಸ ಬಹುದು ಅಥವಾ ದೂರವಾಣಿ ಸಂಖ್ಯೆ: 080-22536200ಗೆ ಕರೆ ಮಾಡ ಬಹುದು ಎಂದು ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi