Dailyhunt Logo
  • Light mode
    Follow system
    Dark mode
    • Play Story
    • App Story
ಕ್ರೆಡಿಟ್ ಕಾರ್ಡ್‌ನಿಂದ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕ್ರೆಡಿಟ್ ಕಾರ್ಡ್‌ನಿಂದ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕುಂದಾಪುರ, ಅ.23: ಎಪಿಕೆ ಫೈಲ್ ಕಳುಹಿಸಿ ಕ್ರೆಡಿಟ್ ಕಾರ್ಡ್‌ನಿಂದ ಲಕ್ಷಾಂತರ ರೂ. ಹಣ ವರ್ಗಾಯಿಸಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇಖರ(68) ಎಂಬವರ ಮೊಬೈಲ್‌ಗೆ ಅ.21ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ, ನೀವು ಸೀನಿಯರ್ ಸಿಟಿಜನ್ ಆಗಿರುವುದರಿಂದ ನಿಮಗೆ ಪಂಜಾಬ್ ನ್ಯಾಶನಲ್ ಬ್ಯಾಂಕ್‌ನಿಂದ ಕ್ರೇಡಿಟ್ ಕಾರ್ಡ್ ನೀಡುತ್ತಿದ್ದೇವೆ ಎಂದು ಹೇಳಿ ಶೇಖರ್ ಅವರ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದನು.

ಬಳಿಕ ಎಪಿಕೆ ಪೈಲ್ ಕಳುಹಿಸಿ ಬ್ಯಾಂಕಿಗೆ ಸಂಬಂಧಿಸಿದ ವಿವರವನ್ನು ಕೇಳಿದ್ದನು. ನಂತರ ಶೇಖರ್, ಪರಿಶೀಲಿಸಿದಾಗ ಅವರ ಕ್ರೇಡಿಟ್ ಕಾರ್ಡ್‌ನಿಂದ ವಿವಿಧ ಹಂತಗಳಲ್ಲಿ ಒಟ್ಟು 2,24,124ರೂ. ಹಣವನ್ನು ಸೈಬರ್ ಅಪರಾಧಿಗಳು ವರ್ಗಾಯಿಸಿಕೊಂಡು ಮೋಸ ಮಾಡಿರುವುದಾಗಿ ದೂರಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi