Dailyhunt Logo
  • Light mode
    Follow system
    Dark mode
    • Play Story
    • App Story
ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆಯಿತು. ಕ್ಷತ್ರಿಯ ಮರಾಠ ಸಮಾಜದ ಅಧ್ಯಕ್ಷ ಶುಭದರಾವ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ಉಮೇಶ್ ರಾವ್ ಉದ್ಘಾಟಿಸಿದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 7 ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಸಮಾಜದ ಇತರ 107 ವಿದ್ಯಾರ್ಥಿಗಳಿಗೆ 1.42 ಲಕ್ಷ ರೂ. ವಿದ್ಯಾರ್ಥಿ ವೇತನ ಮತ್ತು ಬ್ಯಾಗ್ ವಿತರಿಸಿ ಪುರಸ್ಕರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ರಾವ್, ಕೆಕೆಎಂಪಿ ತಾಲೂಕು ಘಟಕದ ಅಧ್ಯಕ್ಷ ಕೀರ್ತನ್ ಲಾಡ್, ಸಮಾಜ ಮುಂದಾಳು ರಮಾನಾಥ್ ರಾವ್ ಜೋಡುಕಟ್ಟೆ, ಸಿಎ ಹರೀಶ್ ಮೋರೆ, ಶಿಕ್ಷಕಿ ಲಕ್ಷ್ಮೀ ಸಂದರ್ಭೋಚಿತ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಶೇಖರ್ ರಾವ್, ಉದ್ಯಮಿ ನವೀನ್ ರಾವ್ ಕಾಳಿಕಾಂಬ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಾನಿಗಳಾದ ಸತ್ಯಾರ್ಥಿ ರಾವ್ ಸಾಣೂರು ಹಾಗೂ ಸಂತೋಷ್ ರಾವ್ ಜೋಡುರಸ್ತೆ ಇವರನ್ನು ಗೌರವಿಸಲಾಯಿತು.

ಶಿಕ್ಷಕಿಯರಾದ ದಿವ್ಯಾ ಹರೇಂದ್ರ ಸ್ವಾಗತಿಸಿ, ಆಶಾಲತಾ ಗಿರೀಶ್ ವಿದ್ಯಾರ್ಥಿಗಳ ವಿವರ ವಾಚಿಸಿದರು. ಕಾರ್ಯದರ್ಶಿ ಪ್ರಸನ್ನ ರಾವ್ ಧನ್ಯವಾದವಿತ್ತರು. ಶಿಕ್ಷಕ ಹರೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi