Dailyhunt Logo
  • Light mode
    Follow system
    Dark mode
    • Play Story
    • App Story
ಲೋಕಸಭೆಗೆ 'ಸುಳ್ಳು ಮಾಹಿತಿ' ನೀಡಿದ ಆರೋಪ: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕು ಚ್ಯುತಿ ನಿರ್ಣಯ ಮಂಡಿಸಿದ ಕೆ.ಸಿ. ವೇಣುಗೋಪಾಲ್

ಲೋಕಸಭೆಗೆ 'ಸುಳ್ಳು ಮಾಹಿತಿ' ನೀಡಿದ ಆರೋಪ: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕು ಚ್ಯುತಿ ನಿರ್ಣಯ ಮಂಡಿಸಿದ ಕೆ.ಸಿ. ವೇಣುಗೋಪಾಲ್

ಹೊಸದಿಲ್ಲಿ: ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆದಿಲ್ಲ ಎಂದು ಲೋಕಸಭೆಯಲ್ಲಿ 'ಸುಳ್ಳು ಹೇಳಿಕೆ' ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವಿರೋಧ ಪಕ್ಷಗಳು ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ.

ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದರು.

ಜುಲೈ 20ರ 'ಸಂಸತ್ ಚಲೋ' ಮೆರವಣಿಗೆ ವೇಳೆ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಹೇಳುವ ಮೂಲಕ ಜಿತೇಂದ್ರ ಸಿಂಗ್ ಲೋಕಸಭೆಯನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಲೋಕಸಭೆಯ ಕಾರ್ಯವಿಧಾನ ಮತ್ತು ವ್ಯವಹಾರ ನಿರ್ವಹಣಾ ನಿಯಮ 222ರ ಅಡಿಯಲ್ಲಿ ಸಲ್ಲಿಸಿದ ನೋಟಿಸ್‌ನಲ್ಲಿ, ವೇಣುಗೋಪಾಲ್ ಅವರು ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕುಚ್ಯುತಿ ಕ್ರಮ ಆರಂಭಿಸುವಂತೆ ಆಗ್ರಹಿಸಿದ್ದಾರೆ.

ಜುಲೈ 29ರಂದು ನಡೆದ 'ಸಾರ್ವಜನಿಕ ಪರೀಕ್ಷೆಗಳು (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ-2026' ಕುರಿತ ಚರ್ಚೆಯ ವೇಳೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ನೀಡಿದ ಉತ್ತರವನ್ನು ವೇಣುಗೋಪಾಲ್ ತಮ್ಮ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

'ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಅಶ್ರುವಾಯು ಮಾತ್ರ ಬಳಸಲಾಗಿದೆ. ಗುಂಡಿನ ದಾಳಿಯೇ ನಡೆಯದಿದ್ದಾಗ ಆದೇಶದ ಬಗ್ಗೆ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದು ಸಚಿವರು ಹೇಳಿದ್ದರು.

ಈ ಹೇಳಿಕೆ ವಾಸ್ತವಕ್ಕೆ ವಿರುದ್ಧವಾಗಿದೆ ಎಂದು ಕೆ.ಸಿ ವೇಣುಗೋಪಾಲ್ ಆರೋಪಿಸಿದ್ದಾರೆ. ಸಂಸತ್ತನ್ನು ತಪ್ಪು ದಾರಿಗೆಳೆಯುವುದು ಹಕ್ಕುಚ್ಯುತಿ ಹಾಗೂ ಸದನಕ್ಕೆ ಅವಿಧೇಯತೆಗೆ ಸಮಾನವಾಗಿದೆ ಎಂದು ವಾದಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi