ರೋಮ್, ಎ.3: ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ರಾಜತಾಂತ್ರಿಕ ಮಾರ್ಗಗಳನ್ನು ಅನುಸರಿಸುವಂತೆ ಪೋಪ್ ಲಿಯೊ XIV ಅವರು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಝೋಗ್ ಅವರಿಗೆ ಮನವಿ ಮಾಡಿದ್ದಾರೆ.
ಈಸ್ಟರ್ ಹಬ್ಬದ ಸಂದರ್ಭದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ದೂರವಾಣಿ ಸಂಭಾಷಣೆಯಲ್ಲಿ, ಪ್ರಸ್ತುತ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಹಿಡಿಯಲು ಎಲ್ಲಾ ಸಾಧ್ಯವಾದ ರಾಜತಾಂತ್ರಿಕ ಮಾರ್ಗಗಳನ್ನು ತೆರೆದಿಡುವ ಅಗತ್ಯತೆಯನ್ನು ಪೋಪ್ ಒತ್ತಿಹೇಳಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.

