Dailyhunt Logo
  • Light mode
    Follow system
    Dark mode
    • Play Story
    • App Story
ಮಡಿಕೇರಿ: ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಡಿಕೇರಿ: ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಡಿಕೇರಿ: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕರಿಕೆ ಗ್ರಾಮದ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕರಿಕೆ ವಲಯ ಅರಣ್ಯಾಧಿಕಾರಿಗಳು ಅರಣ್ಯದಲ್ಲಿ ಬೀಟ್ ತೆರಳುತ್ತಿದ್ದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಕರಿಕೆ ಉಪ ಠಾಣಾ ಪೊಲೀಸ್ ಸಿಬ್ಬಂದಿಗಳು, ಭಾಗಮಂಡಲ ಪೊಲೀಸ್ ಠಾಣಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರಿಕೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಸಮೀಪ ನೀಲಿ ಬಣ್ಣದ ಶರ್ಟ್ ಇದ್ದು, ಕಾವಿ ಬಣ್ಣದ ಪಂಚೆಯಲ್ಲಿ ನೇಣು ಕುಣಿಕೆ ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi